ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ನಿಧನ
ಬೆಂಗಳೂರು: ಕರ್ನಾಟಕದ ಪ್ರಖ್ಯಾತ ರಂಗಕರ್ಮಿ, ಹಿರಿಯ ನಟ ಮಾಸ್ಟರ್ ಹಿರಣ್ಣಯ್ಯ ಅವರು ಗುರುವಾರ ಕೊನೆಯುಸಿರೆಳೆದರು. ರಂಗಭೂಮಿ ಕಲಾವಿದ 85 ವರ್ಷದ ಮಾಸ್ಟರ್ ಹಿರಣ್ಣಯ್ಯ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ. ಸಕಾಲಿಕ ರಾಜಕೀಯ, ಸಾಮಾಜಿಕ ವಿದ್ಯಮಾನಗಳನ್ನು ತಮ್ಮ ನಾಟಕದ ಸಂಭಾಷಣೆಗಳಲ್ಲಿ ಸುಲಲಿತವಾಗಿ ಎಳೆದು ತರುವ ಮೂಲಕ ಪಂಚ್ ನೀಡುವಲ್ಲಿ ಪ್ರಸಿದ್ಧಿ ಗಳಿಸಿದ್ದ ಹಿರಣ್ಣಯ್ಯ ಪತ್ನಿ ಮತ್ತು ಐವರು ಮಕ್ಕಳನ್ನು ಅಗಲಿದ್ದಾರೆ.