ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಿಎಂ ಕುಮಾರಸ್ವಾಮಿ
ಉಡುಪಿ: ಲೋಕಸಭೆ ಚುನಾವಣೆ ಹಿನ್ನೆಲೆ ಯಲ್ಲಿ ಭಾನುವಾರ ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪೇಜಾವರ ಮಠಕ್ಕೆ ಭೇಟಿ ನೀಡಿ ವಿಶ್ವೇಶತೀರ್ಥ ಸ್ವಾಮೀಜಿ ಅವರೊಂದಿಗೆ ಕೆಲಕಾಲ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಪೇಜಾವರ ಕಿರಿಯ ವಿಶ್ವಪ್ರಸನ್ನ ಸ್ಗಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ, ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಉಡುಪಿ ಚೊಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿಇದ್ದರು.