ಚಲಿಸುವ ಕಾರಿನಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.

ಮಥುರಾ: ಮೂವರು ಕಿಡಿಗೇಡಿಗಳು 13 ವರ್ಷದ ಬಾಲಕಿಯನ್ನು ಅಪಹರಿಸಿ, ಚಲಿಸುವ ಕಾರಿನಲ್ಲೇ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕಾರಿನಿಂದ ಹೊರಗೆಸೆದಿದ್ದಾರೆ ಎಂದು ಆರೋಪಿಸಲಾಗಿದೆ ಈ ಬಗ್ಗೆ ಬಾಲಕಿ ತಂದೆ ನೀಡಿರುವ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಪ್ರದೇಶದ ಮಥುರಾದಲ್ಲಿ ಘಟನೆ ನಡೆದಿದ್ದು, ಅಸ್ವಸ್ಥಗೊಂಡಿದ್ದ ಆಕೆಯನ್ನು ವೈದ್ಯರ ಬಳಿ ಪೋಷಕರು ಕರೆದೊಯ್ದಾಗ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಇದೀಗ ಆಕೆಯ ಪೋಷಕರು ಛಾಟಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ […]