ಮಥುರಾದ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಗೆ ಆಯೋಗ ರಚನೆಗೆ ಅಲಹಾಬಾದ್ ಹೈಕೋರ್ಟ್ ಒಪ್ಪಿಗೆ

ಅಲಹಾಬಾದ್: ಭಗವಾನ್ ಶ್ರೀಕೃಷ್ಣನ ಜನ್ಮಸ್ಥಳ ಮಥುರಾದಲ್ಲಿ ಕೃಷ್ಣ ದೇವಸ್ಥಾನದ ಪ್ರದೇಶದಲ್ಲಿ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದ್ದು, ಈ ಬಗ್ಗೆ ಹಿಂದೂ ಪರ ಅರ್ಜಿದಾರರು ದೇವಾಲಯ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ಮಾಡಲು ಅನುಮತಿ ಕೋರಿ ಅಲಹಾಬಾದ್ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಶಾಹಿ ಈದ್ಗಾ ಮಸೀದಿ ಸಂಕೀರ್ಣವನ್ನು ಪರಿಶೀಲಿಸಲು ಆಯೋಗವನ್ನು ನೇಮಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ಅಂಗೀಕರಿಸಿದೆ. ಅರ್ಜಿದಾರರ ಪರ ವಕೀಲ ರಂಜನಾ ಅಗ್ನಿಹೋತ್ರಿ ಮಾಧ್ಯಮದ ಜೊತೆ ಮಾತನಾಡಿ, ಸ್ಥಳವನ್ನು ಸಮೀಕ್ಷೆ ಮಾಡಲು ಆಯೋಗವನ್ನು ನೇಮಿಸಬೇಕೆಂಬ […]