ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರ ನೋಂದಣಿ ಪ್ರಾರಂಭ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾರಿಗೊಳಿಸಲಾದ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ನೋಂದಾಯಿಸಿಕೊಳ್ಳಬಹುದಾಗಿದೆ. ಈ ಯೋಜನೆಯಡಿ ಮೊದಲ ಪ್ರಸವದ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರಿಗೆ 5,000 ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು. ಎರಡನೇ ಪ್ರಸವದಲ್ಲಿ ಜನಿಸುವ ಹೆಣ್ಣು ಮಗುವಿಗೆ 6,000 ರೂ. ಗಳ ಪ್ರೋತ್ಸಾಹಧನ ನೀಡಲಾಗುವುದು. ಈ ಪ್ರೋತ್ಸಾಹಧನವು ಗರ್ಭಿಣಿ / ಬಾಣಂತಿ ಮಹಿಳೆಯರು ಪೂರಕ ಆಹಾರ ಪಡೆಯಲು ಹಾಗೂ ಆರೋಗ್ಯವಂತ ಮಗುವಿನ ಜನನಕ್ಕೆ […]
ಪೋಷಣ್ ಅಭಿಯಾನ- ಮಾತೃವಂದನ ಸಪ್ತಾಹ ಕಾರ್ಯಕ್ರಮ
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪೋಷಣ್ ಮಾಸಾಚರಣೆ ಹಾಗೂ ಪ್ರಧಾನಮಂತ್ರಿ ಮಾತೃವಂದನ ಯೋಜನೆಯ ಸಪ್ತಾಹ ಕಾರ್ಯಕ್ರಮವು ಬುಧವಾರ ನಗರದ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಭಾಗೀದಾರ ಇಲಾಖೆಗಳು ಪೋಷಣ್ ಮಾಸಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮಗಳನ್ನು ವೇಳಾಪಟ್ಟಿಯನ್ವಯ ಆಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಕಾರ್ಯಕ್ರಮದಲ್ಲಿ ಪೋಷಣ್ ಮಾಸಾಚರಣೆಯ ಪೋಸ್ಟರ್‌ಗಳನ್ನು […]