ರಾಜ್ಯ ಗೃಹಮಂತ್ರಿಯ ದಬ್ಬಾಳಿಕೆ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯ

ಉಡುಪಿ: ರಾಜ್ಯ ಸರ್ಕಾರದ ಗೃಹ ಮಂತ್ರಿಗಳ ದಬ್ಬಾಳಿಕೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ನೇತೃತ್ವದ ನಿಯೋಗ ಸೋಮವಾರ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಆ ನಂತರ ಮಾತನಾಡಿದ ಮಟ್ಟಾರು ರತ್ನಾಕರ ಹೆಗ್ಡೆ, ಕಳೆದ ಕೆಲವು ತಿಂಗಳಿನಿಂದ ಸಮ್ಮಿಶ್ರ ಸರ್ಕಾರವು ಮಾಧ್ಯಮವೂ ಸೇರಿದಂತೆ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಸೇಡಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬಿಜೆಪಿಯು ತನ್ನ ವಿರುದ್ಧ ನಡೆಯುತ್ತಿರುವ ಸೇಡಿನ ಕ್ರಮಗಳ ವಿರುದ್ಧ […]

ಕಾಂಗ್ರೆಸ್ ನದ್ದು ಪಾಕ್‌ ಪ್ರಧಾನಿ ಪ್ರಚೋದಿತ ಪ್ರಣಾಳಿಕೆ: ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ಗಂಭೀರ ಆರೋಪ

ಉಡುಪಿ: ಕಾಂಗ್ರೆಸ್ ಪ್ರಕಟಿಸಿರುವ ಪ್ರಣಾಳಿಕೆಯಲ್ಲಿ ಕಾಲಂ 124ಎ ದೇಶದ್ರೋಹ ನಿಷೇಧ ಕಾಯ್ದೆಯನ್ನು ಸಂವಿಧಾನದಿಂದ ತೆಗೆದುಹಾಕುತ್ತೇವೆ. ಜಮ್ಮು–ಕಾಶ್ಮೀರದ ಸೈನಿಕರಿಗೆ ಕೊಟ್ಟಿರುವ ಸ್ವತಂತ್ರ ಅಧಿಕಾರವನ್ನು ಹಿಂಪಡೆಯುತ್ತೇವೆಂದು ಆಶ್ವಾಸನೆ ನೀಡಿದ್ದಾರೆ. ಇದನ್ನು ಗಮನಿಸಿದರೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಮಾಡಿದ್ದಾರ ಅಥವಾ ಭಯೋತ್ಪಾದಕರು ಮಾಡಿಕೊಟ್ಟಿದ್ದಾರ ಎಂಬ ಸಂಶಯ ಮೂಡುತ್ತಿದೆ. ಕಾಂಗ್ರೆಸ್‌ ನಮ್ಮ ದೇಶವನ್ನು ಬಲಿಕೊಡಲು ಹೊರಟಿದೆ. ಕಾಶ್ಮೀರ ಭಾಗವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಡುವ ಪಿತೂರಿ ನಡೆಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಆರೋಪಿಸಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ಸೋಮವಾರ […]