ಬಸವಣ್ಣರ ಸಂದೇಶ ಜನತೆಗೆ ತಲುಪಿಸಲು ಸಂಕಲ್ಪ, ಬೆಂಬಲ ಅಗತ್ಯ: ಜಿ. ರಾಜಶೇಖರ್‌

ಉಡುಪಿ: ಬಸವಣ್ಣನವರು ‌ಹನ್ನೆರಡನೇ ಶತಮಾನದಲ್ಲಿ ಪ್ರವಾಹ, ಪ್ರವೃತಿ ಹಾಗೂ‌ ಬಹುಜನರ ಸಂಕಲ್ಪದ ವಿರುದ್ಧ ಈಜಿ ಅಸಮಾನತೆಯ ಪರಿಸ್ಥಿತಿಯನ್ನು ಬದಲಾಯಿಸಲು ಪ್ರಯತ್ನಿಸಿದರು. ಇಂದು ಸಾಣೆಹಳ್ಳಿ ಸ್ವಾಮೀಜಿ ಕಾಲದ ಪ್ರವಾಹದ ವಿರುದ್ಧ ಈಜಲು ಹೊರಟಿದ್ದು, ಆ ಮೂಲಕ ಬಸವಣ್ಣರ ಸಂದೇಶಗಳನ್ನು ಜನರಿಗೆ ಮುಟ್ಟಿಸಲು ಸಂಕಲ್ಪಿಸಿದ್ದಾರೆ. ಅವರಿಗೆ ನಾವೆಲ್ಲ ಬೆಂಬಲ ನೀಡಬೇಕಾಗಿದೆ ಎಂದು ಹಿರಿಯ ಚಿಂತಕ ಜಿ. ರಾಜಶೇಖರ್‌ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಸಾಣೆಹಳ್ಳಿಯ ಶ್ರೀತರಳಬಾಳು ಜಗದ್ಗುರು ಶಾಖಾ ಮಠದ ಸಹಮತ ವೇದಿಕೆ ಮತ್ತು ಉಡುಪಿ ಬಸವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ […]

ಆ.2: ಉಡುಪಿಯಲ್ಲಿ ಮತ್ತೆ ಕಲ್ಯಾಣ ಕಾರ್ಯಕ್ರಮ

ಉಡುಪಿ: ಚಿತ್ರದುರ್ಗ ಸಾಣೆಹಳ್ಳಿಯ ಶ್ರೀ ತರಳಬಾಳು ಜಗದ್ಗುರು ಶಾಖಾ ಮಠದ ಸಹಮತ ವೇದಿಕೆ ಮತ್ತು ಉಡುಪಿ ಬಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ರಾಜ್ಯಾದ್ಯಂತ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಆ.2ರಂದು ನಡೆಯಲಿದೆ ಎಂದು ಮತ್ತೆ ಕಲ್ಯಾಣ ಉಡುಪಿ ಸಂಯೋಜನ ಸಮಿತಿ ಅಧ್ಯಕ್ಷ ಯು.ಸಿ. ನಿರಂಜನ್‌ ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾಂತಾವರ ಅಲ್ಲಮಪ್ರಭು ಪೀಠದ ನಿರ್ದೇಶಕ ಡಾ. ನಾ. ಮೊಗಸಾಲೆ,‌ ಬಾಲಕಿಯರ ಪಿಯು ಕಾಲೇಜು ಪ್ರಾಧ್ಯಾಪಕ ಜೆ.ಎಂ. ನಾಗರಾಜ […]