ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ಪ್ರಚಾರಕರು ಕ್ಷೇತ್ರ ತೊರೆಯಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಮತದಾನವು ಮೇ 10 ರಂದು ನಡೆಯಲಿದ್ದು, ಚುನಾವಣೆಯು ಮುಕ್ತ, ನ್ಯಾಯ […]

ಉಡುಪಿ: ಮೇ 9 ಮತ್ತು10 ರಂದು ಕೆ. ಎಸ್.ಆರ್.ಟಿ. ಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವುದರಿಂದ ಮೇ 9 ಹಾಗೂ 10 ರಂದು ಚುನಾವಣಾ ಕರ್ತವ್ಯದ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದ್ದು, ರಾಜ್ಯ ಸಾರಿಗೆ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕ ಪ್ರಯಾಣಿಕರು ಕ.ರಾ.ರ.ಸಾ ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 10…. ಮತ ಒತ್ತು… ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕರೆ

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ನಡೆಯುವ ಮತದಾನ ದಿನದಂದು ಜಿಲ್ಲೆಯ ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವಂತೆ ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಮತದಾನ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಲು ಸಹಕಾರಿಯಾಗುವಂತೆ, ಮೇ 10… ಮತ ಒತ್ತು.. ಎಂಬ ಪ್ರಾಸ ವಾಕ್ಯವನ್ನು ಸುಲಭವಾಗಿ ನೆನಪಿನಲ್ಲಿಡುವಂತೆ ತಿಳಿಸಿದರು. ಅವರು ರವಿವಾರ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರಿಗೆ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸಲು ನಡೆದ, ನಮ್ಮ ನಡೆ ಮತಗಟ್ಟೆಯ […]