ಮೇ.20 ರಿಂದ 25: ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಹಿರಿಯಡಕ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಬ್ರಹ್ಮಕಲಶೋತ್ಸವವು ಮೇ.20 ರಿಂದ 25 ರವರೆಗೆ ವೇದಮೂರ್ತಿ ಷಡಂಗ ಶ್ರೀ ಬಿ. ಗುರುರಾಜ ತಂತ್ರಿ ಅವರ ನೇತೃತ್ವದಲ್ಲಿ ಜರಗಲಿದೆ. ಧಾರ್ಮಿಕ ಕಾರ್ಯಕ್ರಮಗಳು: ಮೇ.20 ರ ಬೆಳಿಗ್ಗೆ 12 ಕಾಯಿ ಗಣಪತಿ ಹೋಮ, ನವಗ್ರಹ ಹೋಮ, ಸಂಜೆ 5ರಿಂದ ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ, ಭೋಜನ ಶಾಲೆ, ಪಾಕಶಾಲೆ, ವಸಂತ ಮಂಟಪ ಉದ್ಘಾಟನೆ ನಡೆಯಲಿದೆ. ಶ್ರೀ ಪೇಜಾವರ […]

ಮೇ.20 ರಿಂದ 25: ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಹಿರಿಯಡಕ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 20 ರಿಂದ 25ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ ಇಂದು ಸಂಜೆ ಗಂಟೆ 3.30 ರಿಂದ ಗುಡ್ಡೆಯಂಗಡಿ, ಪುಪಾಡಿಕಲ್ಲು, ಜೋಡುಕಟ್ಟೆ ಮಾರ್ಗವಾಗಿ ಬೃಹತ್ ಹೊರೆ ಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.