ಕೆಎಂಸಿ ಯಲ್ಲಿ 2023-24 ರ ಮೆಡ್ ಓರಿಯಂಟ್ ಎಂಬಿಬಿಎಸ್ ಬ್ಯಾಚ್ ಉದ್ಘಾಟನೆ
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ (KMC) ಮೆಡ್‌ಓರಿಯಂಟ್ (MBBS ಬ್ಯಾಚ್ 2023-24 ರ ಓರಿಯಂಟೇಶನ್ ಪ್ರೋಗ್ರಾಂ) ಅನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಮಾಹೆಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ ಮಾತನಾಡಿ ವೈದ್ಯರು ಮತ್ತು ನಾಯಕರ ಮಹತ್ವವನ್ನು ತಿಳಿಸಿದರು. ಅವರು ವೈದ್ಯಕೀಯ ಕೌಶಲ್ಯಗಳು, ಸಮಯಪಾಲನೆ, ಬದ್ಧತೆ ಮತ್ತು ರೋಗಿಗಳ ಬಗ್ಗೆ ಸಮರ್ಪಣಾ ಭಾವ, ಅಧ್ಯಯನ ಮತ್ತು ಸಹೋದ್ಯೋಗಿಗಳಿಗೆ ಪ್ರಾಮುಖ್ಯತೆಯನ್ನು ನೀಡುವ ಬಗ್ಗೆ ಹೇಳಿದರು. ಮಾಹೆಯ ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ ಅವರು 2023-24 ನೇ ಸಾಲಿನ […]
ಜ್ಞಾನಸುಧಾ ಕಾಲೇಜಿನಲ್ಲಿ ನೀಟ್ ಲಾಂಗ್ ಟರ್ಮ್ ನೋಂದಣಿ ಆರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ
ಮಣಿಪಾಲ: 2024ರ ನೀಟ್ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಜ್ಞಾನಸುಧಾ ಮಣಿಪಾಲದಲ್ಲಿ ಅನುಭವಿ ಉಪನ್ಯಾಸಕರಿಂದ ತರಬೇತಿ ನೀಡಲಾಗುವುದು. ಕಳೆದ ಎರಡು ವರ್ಷಗಳಲ್ಲಿ 186 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಮೂಲಕ ಎಂ.ಬಿ.ಬಿ.ಎಸ್ ಗೆ ಸೇರಿರುವುದು ಗಮನಾರ್ಹವಾಗಿದೆ. ಪ್ರಸಕ್ತ ಸಾಲಿನ ತರಬೇತಿಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ. 8762280555/ 8762095555
ನೀಟ್ ಮೊದಲ ಸುತ್ತಿನ ಆಯ್ಕೆಯಲ್ಲಿ ಜ್ಞಾನಸುಧಾ ಕಾಲೇಜಿನ 93 ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಗೆ ಪ್ರವೇಶ
ಕಾರ್ಕಳ: ರಾಷ್ಟ್ರಮಟ್ಟದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಇತರ ವೈದ್ಯಕೀಯ ಪ್ರವೇಶಕ್ಕಾಗಿ ನಡೆಸುವ ನೀಟ್-2022ರ ಮೊದಲ ಸುತ್ತಿನ ಆಯ್ಕೆ ಪ್ರಕ್ರಿಯೆಯಲ್ಲಿ ಜ್ಞಾನಸುಧಾ ಕಾಲೇಜಿನ 93 ವಿದ್ಯಾರ್ಥಿಗಳು ರಾಜ್ಯದ ವಿವಿಧ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಗಿಟ್ಟಿಸಿಕೊಂಡಿದ್ದಾರೆ. ವೈದ್ಯಕೀಯ ರಂಗದ ಶೈಕ್ಷಣಿಕ ಕ್ಷೇತ್ರ ಎನಿಸಿಕೊಂಡ ಕರಾವಳಿ ಭಾಗದ ಕೆ.ಎಂ.ಸಿ ಮಂಗಳೂರು ಹಾಗೂ ಕೆ.ಎಂ.ಸಿ ಮಣಿಪಾಲ, ಬಿ.ಎಂ.ಸಿ.ಬೆಂಗಳೂರು, ಎಂ.ಎಂ.ಸಿ. ಮೈಸೂರ್, ಕಿಮ್ಸ್ ಹುಬ್ಬಳ್ಳಿ, ಸಿಮ್ಸ್ ಶಿವಮೊಗ್ಗ ಸಹಿತ ಕರ್ನಾಟಕದ ವಿವಿಧ ಮೆಡಿಕಲ್ ಕಾಲೇಜುಗಳಿಗೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 93 ವಿದ್ಯಾರ್ಥಿಗಳಲ್ಲಿ 59 ಬಾಲಕ ಹಾಗೂ […]