ಮೀನುಗಾರರನ್ನು ಸುರಕ್ಷಿತವಾಗಿ ಕರೆತರಲು ಪ್ರಾಮಾಣಿಕ ಪ್ರಯತ್ನ:ಎಂ.ಬಿ ಪಾಟೀಲ್

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಏಳು ಮಂದಿ ಮೀನುಗಾರರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಎಲ್ಲ ರೀತಿಯ ಶೋಧ ಕಾರ್ಯವನ್ನು ಮಾಡುತ್ತಿದೆ. ಮೀನುಗಾರರನ್ನು ಸುರಕ್ಷಿತವಾಗಿ ಕರೆತರಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿದರು. ಅವರು ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಈ ವಿಚಾರದಲ್ಲಿ ರಾಜಕೀಯ ಬೇಡ. ಎರಡು ಸರಕಾರಗಳು ಮೀನುಗಾರರ ಹುಡುಕಾಟಕ್ಕೆ ಶಕ್ತಿಮೀರಿ ಪ್ರಯತ್ನ ಮಾಡುತ್ತಿದೆ ಎಂದರು. ಈಗಾಗಲೇ ದಿನಕ್ಕೆ ನಾಲ್ಕು […]