ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾರತದ ರಾಷ್ಟ್ರಗಾನದ ಉದ್ಘೋಷ: ಭಾವುಕರಾದ ರೋಹಿತ್ ಶರ್ಮಾ

ಮೆಲ್ಬೋರ್ನ್: ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಭಾನುವಾರದಂದು ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಟಿ20 ವಿಶ್ವ ಕಪ್ ನಲ್ಲಿ ತನ್ನ ಸೂಪರ್ 12 ಪಂದ್ಯದಲ್ಲಿ ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ತಂಡವನ್ನು ಎದುರಿಸುತ್ತಿದೆ. ಪಂದ್ಯ ಆರಂಭಕ್ಕೂ ಮುನ್ನ ಭಾರತದ ರಾಷ್ಟ್ರಗಾನವನ್ನು ನುಡಿಸಲಾಗಿದ್ದು, ಇಡಿಯ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ರಾಷ್ಟ್ರಭಕ್ತಿಯ ಉದ್ಘೋಷ ರಾಷ್ಟ್ರಗಾನದ ರೂಪದಲ್ಲಿ ಮೊಳಗಿದೆ. ನಾಯಕ ರೋಹಿತ್ ಶರ್ಮಾ ಅವರು ಕೊನೆಯ ಕ್ಷಣದಲ್ಲಿ ಭಾವುಕರಾಗಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಭಾರತೀಯ […]