ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತುಗಳನ್ನು ಪ್ರದರ್ಶಿಸಲು ಪೂರ್ವಾನುಮತಿ ಕಡ್ಡಾಯವಾಗಿ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಪ್ರಚಾರಪಡಿಸುವ ಪೂವಾನುಮತಿ ಕುರಿತ ಕಾರ್ಯಗಾರದಲ್ಲಿ ಮಾತನಾಡಿ, ರಾಜಕೀಯ ಪಕ್ಷಗಳು ಚುನಾವಣೆಗೆ ಸ್ಪರ್ಧಿಸಿದ ಆಭ್ಯರ್ಥಿಗಳು, ಚುನಾವಣಾ ಜಾಹೀರಾತುಗಳನ್ನು ಪ್ರಚಾರ ಮಾಡುವ ಮುನ್ನ ಜಿಲ್ಲಾ ಎಂಸಿಎಂಸಿ ಸಮಿತಿಯಿಂದ ಪೂರ್ವ ಪ್ರಾಮಾಣೀಕರಣ ಪಡೆಯಬೇಕು ಎಂದರು. ಜಾಹೀರಾತಿನಲ್ಲಿ ಇತರರನ್ನು ದೂರುವುದು, ಅಸ್ಪಷ್ಟ ಅಥವಾ ಮಾನ ಹಾನಿಕರ, ಹಿಂಸೆಗೆ ಪ್ರಚೋದನೆ, […]

ಎಂಸಿಎಂಸಿ ಸಮಿತಿ ಅನುಮತಿ ಇಲ್ಲದೆ ಮಾಧ್ಯಮಗಳಲ್ಲಿ ಚುನಾವಣಾ ಜಾಹೀರಾತು ಪ್ರಸಾರ ಮಾಡುವಂತಿಲ್ಲ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ, ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಎಂಸಿಎಂಸಿ ಸಮಿತಿಯ ಅನುಮತಿ ಕಡ್ಡಾಯವಾಗಿದ್ದು, ಸಮಿತಿಯ ಅನುಮತಿ ಪಡೆಯದೇ ಜಾಹೀರಾತು ಪ್ರಕಟಿಸಿದಲ್ಲಿ ಸಂಬಂಧಪಟ್ಟವರ ವಿರುದ್ದ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆ ನೀಡಿದ್ದಾರೆ. ಅವರು ಶನಿವಾರ ಜಿಲ್ಲಾಧಿಕಾರಿ […]