ಏ. 15 ರಂದು ರಾಜಕೀಯ ಪಕ್ಷ ಪ್ರತಿನಿಧಿಗಳಿಗಾಗಿ ಸಾಮಾಜಿಕ ಮಾಧ್ಯಮ ಜಾಹೀರಾತು ಕಾರ್ಯಾಗಾರ
ಉಡುಪಿ: ಕರ್ನಾಟಕ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಮಾದರಿ ನೀತಿ ಸಂಹಿತೆಯಡಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತನ್ನು ನೀಡುವ ಕುರಿತು, ಜಿಲ್ಲಾ ಎಂಸಿಎಂಸಿ ಸಮಿತಿ ವತಿಯಿಂದ ಪೂರ್ವಾನುಮತಿ ಪಡೆಯುವ ಪ್ರಕ್ರಿಯೆ ಹಾಗೂ ಜಾಹೀರಾತುಗಳಲ್ಲಿ ಇರಬೇಕಾದ ಅಥವಾ ಇರಬಾರದ ವಿಷಯಗಳು ಸೇರಿದಂತೆ ಇತರ ವಿಷಯಗಳನ್ನು ವಿವರವಾಗಿ ತಿಳಿಸಲು ಎಲ್ಲಾ ರಾಜಕೀಯ ಪಕ್ಷಗಳಿಗೆ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಅವರ ಏಜೆಂಟರುಗಳಿಗೆ ಏಪ್ರಿಲ್ 15 ರಂದು ಬೆಳಗ್ಗೆ 11.30 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಎಲ್ಲಾ […]
ಮಾಧ್ಯಮಗಳಲ್ಲಿ ರಾಜಕೀಯ ಜಾಹೀರಾತುಗಳ ಮೇಲೆ ಎಂಸಿಎಂಸಿ ಮೂಲಕ 24*7 ನಿಗಾ
ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್‌ಬುಕ್-ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ) ಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಎಂಸಿಎಂಸಿ ಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುತ್ತಿರುವುದನ್ನು ಪರಿಶೀಲಿಸಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ […]