ತುಳು, ಕೊಡವ ಭಾಷೆಗಳಿಗೆ ರಾಜ್ಯಭಾಷಾ ಸ್ಥಾನಮಾನ ನೀಡಲು ಕ್ರಮ; ಸಚಿವ ಸುನೀಲ್ ಕುಮಾರ್

ಬೆಂಗಳೂರು: ತುಳು ಮತ್ತು ಕೊಡವ ಭಾಷೆಗಳನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಿ, ರಾಜ್ಯಭಾಷಾ ಸ್ಥಾನಮಾನ ನೀಡಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್‌ ಕುಮಾರ್‌ ಭರವಸೆ ನೀಡಿದರು. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಶೂನ್ಯವೇಳೆಯಲ್ಲಿ ಮಾಡಿದ ಆಗ್ರಹಕ್ಕೆ ಉತ್ತರಿಸಿದ ಅವರು, ‘ತುಳು ಮತ್ತು ಕೊಡವ ಎರಡೂ ಭಾಷೆಗಳನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಇರುವ ತೊಡಕುಗಳ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ನಾನು ಖುದ್ದಾಗಿ ದೆಹಲಿಗೆ ಹೋಗಿ […]