ಎಂಸಿಎಂಸಿ ಸಮಿತಿ ಅನುಮತಿ ಇಲ್ಲದೆ ಮಾಧ್ಯಮಗಳಲ್ಲಿ ಚುನಾವಣಾ ಜಾಹೀರಾತು ಪ್ರಸಾರ ಮಾಡುವಂತಿಲ್ಲ: ಜಿಲ್ಲಾಧಿಕಾರಿ
ಉಡುಪಿ: ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ, ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಎಂಸಿಎಂಸಿ ಸಮಿತಿಯ ಅನುಮತಿ ಕಡ್ಡಾಯವಾಗಿದ್ದು, ಸಮಿತಿಯ ಅನುಮತಿ ಪಡೆಯದೇ ಜಾಹೀರಾತು ಪ್ರಕಟಿಸಿದಲ್ಲಿ ಸಂಬಂಧಪಟ್ಟವರ ವಿರುದ್ದ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆ ನೀಡಿದ್ದಾರೆ. ಅವರು ಶನಿವಾರ ಜಿಲ್ಲಾಧಿಕಾರಿ […]