ಪಶ್ಚಿಮಘಟ್ಟ ತಪ್ಪಲಿನ ಔಷಧೀಯ ಸಸ್ಯಗಳ ಬೆಳೆಗೆ ಸರ್ವ ಸಹಕಾರ: ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿರುವ ಎಲ್ಲಾ ಕ್ಯಾಂಪ್ಕೋ ಸದಸ್ಯರ ಮೂಲಕ ಪಶ್ಚಿಮಘಟ್ಟ ತಪ್ಪಲಿನ ಔಷಧೀಯ ಸಸ್ಯಗಳ ಬೆಳೆಗೆ ಎಲ್ಲಾ ರೀತಿಯ ಅಗತ್ಯ ಪ್ರೋತ್ಸಾಹ ನೀಡುವುದಾಗಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ ಹೇಳಿದರು. ಅವರು ಗುರುವಾರ ಕಾರ್ಕಳ ತಾಲೂಕು ಬಜಗೋಳಿಯ ತ್ರಿಭುವನ ಮಾಳದಲ್ಲಿ, ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ಕರ್ನಾಟಕ ಜೀವವೈವಿಧ್ಯ ಮಂಡಳಿ ಹಾಗೂ ಕಾಂಪ್ಕೋ ಮಂಗಳೂರು ಇವರ ಸಹಯೋಗದಲ್ಲಿ ರಾಷ್ಟ್ರೀಯ ಔಷಧಿ ಗಿಡಮೂಲಿಕಾ ಮಂಡಳಿ ಪ್ರಾಯೋಜಿತ ಯೋಜನೆ […]