ಎಪ್ರಿಲ್ 12 ರಿಂದ ಸಾಂಪ್ರದಾಯಿಕ ಹಾಗೂ ನಾಡ ದೋಣಿಗಳಿಗೆ ಮೀನುಗಾರಿಕೆಗೆ ಅವಕಾಶ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಕೇಂದ್ರ ಸರ್ಕಾರದ ಸೂಚನೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಕರಾವಳಿಯ ಎಲ್ಲಾ ಸಾಂಪ್ರದಾಯಿಕ ಮತ್ತು ನಾಡದೋಣಿ ಮೀನುಗಾರಿಕೆಗೆ ಎಪ್ರಿಲ್ 12ರಿಂದ ಜಾರಿಗೆ ಬರುವಂತೆ ಅವಕಾಶ ಕಲ್ಪಿಸಲಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸುಮಾರು 14 ಸಾವಿರ ನಾಡದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳಿದ್ದು, ಅವುಗಳೆಲ್ಲ ಮೀನುಗಾರಿಕೆಗೆ ತೊಡಗಿಸಿಕೊಳ್ಳಲಿದೆ. ಕರೋನ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಮೀನು ಮಾರಾಟ ಮಾಡಬೇಕೆಂದು ವಿನಂತಿಸಿದ್ದಾರೆ.