ಮಂಗಳೂರು: ಮೀನುಗಾರಿಕಾ ಬಂದರು ಅಭಿವೃದ್ಧಿಗೆ 50 ಲಕ್ಷ ಅನುದಾನ
ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್ ಅವರ ನಿರಂತರ ಪ್ರಯತ್ನದಿಂದ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಮಂಜೂರಾಗಿದೆ. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಅವ್ಯವಸ್ಥೆ ಉಂಟಾಗಿತ್ತು. ಇದನ್ನು ಮನಗಂಡು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಕಳೆದ ತಿಂಗಳು ಜೂ.19ರಂದು ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದರು. ಅನಂತರ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದರು. ಹೀಗಾಗಿ ನಡೆಯಬೇಕಾದ ಕೆಲಸ ಕಾರ್ಯಗಳ ಬಗ್ಗೆ […]
ಮೀನುಗಾರರಿಗೆ ಸರಕು ಸಾಗಾಟದ ವಾಹನದಲ್ಲಿ ಸಂಚರಿಸಲು ಅವಕಾಶ ನೀಡಲು ಒತ್ತಾಯಿಸಿ ಮನವಿ
ಉಡುಪಿ: ಕರಾವಳಿ ಕರ್ನಾಟಕದ ಮೀನುಗಾರರಿಗೆ ಸರಕು ಸಾಗಾಟದ ವಾಹನದಲ್ಲಿ ಸಂಚರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ನೇತೃತ್ವದ ನಿಯೋಗ ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಮಳೆಗಾಲದ ಸಮಯದಲ್ಲಿ ನಾಡದೋಣಿಗಳಲ್ಲಿ ದುಡಿಯುವ ಮೀನುಗಾರರು ತಮ್ಮ ಮೀನುಗಾರಿಕಾ ಬಲೆ ಮತ್ತು ಇನ್ನಿತರ ಪರಿಕರಗಳೊಂದಿಗೆ ಮಲ್ಪೆ ಸಹಿತ ಇತರ ಬಂದರುಗಳಿಗೆ ಟೆಂಪೋ ವಾಹನದಲ್ಲಿ ತೆರಳುತ್ತಾರೆ. ಹಾಗೆಯೇ ತಲೆ ಮೇಲೆ ಬುಟ್ಟಿಯನ್ನು […]
ಪ್ರತ್ಯೇಕ ಮೀನುಗಾರಿಕೆ ಖಾತೆ ಸೇರ್ಪಡೆ ಸ್ವಾಗತಾರ್ಹ: ನಯನ ಗಣೇಶ್
ಉಡುಪಿ: ಕೇಂದ್ರ ಸಚಿವ ಸಂಪುಟದಲ್ಲಿ ಮೀನುಗಾರಿಕೆ ಖಾತೆ ಸೇರ್ಪಡೆ ಮಾಡಿ ಗಿರಿರಾಜ್ ಸಿಂಗ್ ಅವರನ್ನು ಮೊದಲ ಸಚಿವರನ್ನಾಗಿ ನೇಮಕ ಮಾಡಿದ ಪ್ರಧಾನಿ ನರೇಂದ್ರ ಮೋದಿ ಯವರ ನಿರ್ಧಾರ ವನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ನಯನ ಗಣೇಶ್ ಸ್ವಾಗತಿಸಿದ್ದರೆ. ಚುನಾವಣಾ ಪೂರ್ವ ದಲ್ಲಿ ನೀಡಿದ ಅಶ್ವಾಸನೆಯಂತೆ ಪ್ರಧಾನಿ ಯವರು ಮೊದಲ ಕ್ಯಾಬಿನೆಟ್ ಲ್ಲಿ ಹೊಸ ಇಲಾಖೆಯನ್ನು ಸೇರ್ಪಡೆ ಮಾಡಿ ಕರಾವಳಿಯಾ ಮೀನುಗಾರ ಹಿತವನ್ನು ಕಾಪಾಡಿಕೊಳ್ಳುವ ಕಾರ್ಯ ಮಾಡಿದ್ದು ಮುಂದಿನ ದಿನಗಳಲ್ಲಿ ಈ ಇಲಾಖೆ ಮೀನುಗಾರ ಸಮಸ್ಯೆ ಗಳಿಗೆ ಪ್ರಾಮಾಣಿಕವಾಗಿ […]
ಯಾಂತ್ರೀಕೃತ ಮೀನುಗಾರಿಕೆ ನಿಷೇಧ: ಉಲ್ಲಂಘಿಸಿದರೆ ಸಬ್ಸಿಡಿ ಇಲ್ಲ
ಉಡುಪಿ, ಮೇ 27: ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆಯನ್ವಯ ಉಡುಪಿ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧ ಆದೇಶ ಹೊರಡಿಸಿರುತ್ತಾರೆ. ಅಲ್ಲದೆ ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯವು […]
ಮೀನುಗಾರರ ಮನೆಗೆ ಕೇಂದ್ರ ರಕ್ಷಣಾ ಸಚಿವೆ ಭೇಟಿ: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಕಣ್ಣೀರಿಟ್ಟ ಕುಟುಂಬಸ್ಥರು
ಉಡುಪಿ: ನಾಪತ್ತೆಯಾಗಿರುವ ಮೀನುಗಾರರ ಕುಟುಂಬಗಳಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಜೊತೆ ನಿರ್ಮಲಾ ಸೀತಾರಾಮನ್ ಅವರು ಮಲ್ಪೆಯಲ್ಲಿರುವ ಮೀನುಗಾರರ ಮನೆಗೆ ಭೇಟಿ ಕೊಟ್ಟಾಗ ಬಂಧುಗಳ ಕಣ್ಣೀರ ಕಟ್ಟೆ ಒಡೆಯಿತು. ಮೂರು ತಿಂಗಳ ಹಿಂದೆ ಮೀನುಗಾರಿಕೆಗೆ ತೆರಳಿದ ಮೀನುಗಾರರ ಹುಡುಕಾಟ ಇನ್ನೂ ನಡೆಯುತ್ತಲೇ ಇದೆ. ಕುಟುಂಬಸ್ಥರು ಇವತ್ತು ಬರ್ತಾರೆ ನಾಳೆ ಬರ್ತಾರೆ ಎಂದು ಕಾಯುತ್ತಲೇ ಇದ್ದಾರೆ. ಕಾಣೆಯಾದ ಚಂದ್ರಶೇಖರ, ದಾಮೋದರ ಅವರ ಮನೆಗಳಿಗೆ ಭೇಟಿ […]