ನಾಪತ್ತೆಯಾದ ಮೀನುಗಾರರನ್ನು ಹುಡುಕಿಕೊಡುವಲ್ಲಿ ಸರ್ಕಾರದ ನಿರ್ಲಕ್ಷ್ಯ: ಮೀನುಗಾರರ ಕುಟುಂಬದಿಂದ ಮತದಾನ ಬಹಿಷ್ಕಾರ
ಉಡುಪಿ: ನಾಪತ್ತೆಯಾಗಿರುವ ಏಳು ಮಂದಿ ಮೀನುಗಾರರನ್ನು ಹುಡುಕಿಕೊಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ನಾಪತ್ತೆಯಾದ ಮೀನುಗಾರರ ಮನೆಯ ಕುಟುಂಬದವರು ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ. ಮಲ್ಪೆ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಸಹಿತ ಏಳು ಮಂದಿ ಮೀನುಗಾರರು ಕಣ್ಮರೆಯಾಗಿ 87 ದಿನಗಳು ಕಳೆದಿವೆ. ಕಣ್ಮರೆಯಾಗಿರುವ ಏಳು ಮಂದಿ ಮೀನುಗಾರರ ಕುಟುಂಬದವರಲ್ಲಿ ಮೌನದ ಛಾಯೆ ಆವರಿಸಿದೆ. ಮೀನುಗಾರರು ಬರುತ್ತಾರೆ ಎಂಬ ನಂಬಿಕೆಯ ಮೇಲೆ ದಿನದೂಡುತ್ತಿದ್ದಾರೆ. ಆದರೆ ಮೀನುಗಾರರ ನಾಪತ್ತೆ ಪ್ರಕರಣದ ಬಗ್ಗೆ ಮೌನವಾಗಿರುವ […]
ಮೀನುಗಾರರ ನಿಯೋಗದಿಂದ ಕೇಂದ್ರ ರಕ್ಷಣಾ ಸಚಿವರ ಭೇಟಿ: ನಾಪತ್ತೆಯಾಗಿರುವ ಮೀನುಗಾರರ ರಕ್ಷಣೆಗೆ ಆಗ್ರಹ
ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಹಾಗೂ 7 ಮಂದಿ ಮೀನುಗಾರರ ನಾಪತ್ತೆ ಪ್ರಕರಣದ ಶೀಘ್ರ ತನಿಖೆ ನಡೆಸಿ ಮೀನುಗಾರರನ್ನು ರಕ್ಷಿಸುವಂತೆ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಮೀನುಗಾರರ ನಿಯೋಗ ಬೆಂಗಳೂರು ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಕೇಂದ್ರ ರಕ್ಷಣಾ ಸಚಿವ ನಿರ್ಮಲ ಸೀತಾರಾಮ್ ಅವರನ್ನು ಇಂದು ಭೇಟಿಯಾಗಿ ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಸಚಿವೆ ನಿರ್ಮಲ ಸೀತಾರಾಮ್, ಆದಷ್ಟು ಬೇಗ ಮಲ್ಪೆಗೆ ಆಗಮಿಸಿ ಈ ಬಗ್ಗೆ ಸೂಕ್ತ ರೀತಿಯಲ್ಲಿ ಅವಲೋಕನ […]
ಹೊಳೆಯಲ್ಲಿ ಪತ್ತೆಯಾಯಿತು 30 ಕೆ.ಜಿ. ಗಾತ್ರದ ಮೀನು
ಕುಂದಾಪುರ : ಕುಂದಾಪುರ ತಾಲೂಕಿನ ಕೊಡೇರಿಯ ಎಡಮಾವಿನ ಹೊಳೆಯಲ್ಲಿ ಬುಧವಾರ ಸ್ಥಳೀಯ ಮೀನುಗಾರರಾದ ಸುಧೀರ್ ಹಾಗೂ ವಿಶ್ವನಾಥ್ ಸಹೋದರರಿಗೆ ಬೃಹತ್ ಗಾತ್ರದ ಕಾದರ್ (ಅವರ್ಗಿ) ಮೀನು ದೊರೆತಿದೆ. ಈ ಮೀನು ಸುಮಾರು 30 ಕೆಜಿ ಇದೆ. ಆಳ ಸಮುದ್ರಲ್ಲಿ ಇರುವ ಈ ಮೀನು ಹೊಳೆಯಲ್ಲಿ ಸಿಕ್ಕಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣ ಜ.6ರಂದು ಮೀನುಗಾರರಿಂದ ಕರಾವಳಿಯಾದ್ಯಂತ ಪ್ರತಿಭಟನೆ
ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ‘ಸುವರ್ಣ ತ್ರಿಭುಜ’ ಬೋಟ್ ಹಾಗೂ 7 ಮೀನುಗಾರರು ಕಣ್ಮರೆಯಾಗಿ 19 ದಿನಗಳು ಕಳೆದರೂ ಬೋಟ್ ಮತ್ತು ಮೀನುಗಾರರನ್ನು ಪತ್ತೆ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯತೆಯನ್ನು ಖಂಡಿಸಿ ಹಾಗೂ ಪ್ರಕರಣವನ್ನು ಶೀಘ್ರವಾಗಿ ಪತ್ತೆ ಮಾಡುವಂತೆ ಒತ್ತಾಯಿಸಿ ಜ.6ರಂದು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮೀನುಗಾರಿಕೆ ಸ್ಥಗಿತಗೊಳಿಸಿ ರಾಷ್ಟ್ರೀಯ ಹೆದ್ದಾರಿ 66 ಅನ್ನು ತಡೆದು ಪ್ರತಿಭಟನೆ ಮಾಡಲು ಮೀನುಗಾರರು ಸಮಾಲೋಚನಾ ಸಭೆಯಲ್ಲಿ ನಿರ್ಧರಿಸಿದ್ದಾರೆ. ಮಲ್ಪೆ ಮೀನುಗಾರರ ಸಂಘ ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ […]