ಸೆಪ್ಟೆಂಬರ್ 3ರಂದು ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಉಡುಪಿ: ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಇದರ ಕಾರ್ಯಕರ್ತರ ಸಭೆಯು ಸೆಪ್ಟೆಂಬರ್ 3ರಂದು 4 ಗಂಟೆಗೆ ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಳಿಯ ರಾಧ್ಮಾ ರೆಸಿಡೆನ್ಸಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ತೋನ್ಸೆ ಹಾಗೂ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಗ್ರಾಮೀಣ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.