ಉಡುಪಿ: ರಿಕ್ಷಾ ಚಾಲಕರ ವಿರುದ್ಧ ದೂರು ಹಿನ್ನೆಲೆ-ಸಭೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಆಟೋರಿಕ್ಷಾಗಳಲ್ಲಿ ಮೀಟರ್ ಅಳವಡಿಸುವಿಕೆ, ಸಾರ್ವಜನಿಕ ಪ್ರಯಾಣಿಕರೊಂದಿಗೆ ಅನುಚಿತ ವರ್ತನೆ ಹಾಗೂ ಇನ್ನಿತರ ದೂರುಗಳು ವ್ಯಾಪಕವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ ೨೬ ರಂದು ಬೆಳಗ್ಗೆ ೧೧.೩೦ ಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ (ಸಾರಿಗೆ ಸೌಧ, ರಜತಾದ್ರಿ, ಮಣಿಪಾಲ) ಸಭೆ ಕರೆಯಲಾಗಿದ್ದು, ಜಿಲ್ಲೆಯ ಎಲ್ಲಾ ಆಟೋರಿಕ್ಷಾ ಚಾಲಕ/ ಮಾಲಕ ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಅವರ ಪ್ರತಿನಿಧಿಗಳು ಸಭೆಗೆ ಹಾಜರಾಗುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.