ಕೊರೊನಾ ನಾಲ್ಕನೇ ಅಲೆ ಆತಂಕ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಕುರಿತು ವಿಶೇಷ ಸಭೆ

ಬೆಂಗಳೂರು: ದೇಶದಲ್ಲಿ ಕೊರೊನಾ ನಾಲ್ಕನೇ ಅಲೆಯ ಆತಂಕ ಮತ್ತೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಕೇರಳ ಸೇರಿದಂತೆ ಅನೇಕ ಭಾಗಗಳಲ್ಲಿ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್‌ 27ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆಯನ್ನು ನೀಡಲಿದ್ದಾರೆ, ಆ ಬಳಿಕ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ. ಇಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಧ್ಯಾಹ್ನ 12.30 ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ಕುರಿತಂತೆ […]

ಇಂದಿನಿಂದ ದ.ಕ. ಜಿಲ್ಲೆಯಾದ್ಯಂತ ಸಾರ್ವಜನಿಕ ಜಾತ್ರೆ, ಉತ್ಸವ, ಸಭೆ, ಸಮಾರಂಭ ನಿಷೇಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕ ಜಾತ್ರೆ, ಉತ್ಸವ, ಸಭೆ, ಸಮಾರಂಭ ಮುಂತಾದ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಕಳೆದ 15 ದಿನಗಳಿಂದ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಮುಂಬರುವ ಹಬ್ಬಗಳಾದ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್‌ಫ್ರೈಡೆ ಇತ್ಯಾದಿ ಸಂದರ್ಭಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸದಂತೆ ಮತ್ತು ಧಾರ್ಮಿಕ ಉತ್ಸವಗಳೊಂದಿಗೆ ಜಾತ್ರೆ/ಮೇಳಗಳನ್ನು ನಡೆಸದಂತೆ ಆದೇಶಿಸಲಾಗಿದೆ […]