ಸಂಚಾರದಲ್ಲಿ ವ್ಯತ್ಯಯ : ಬೆಂಗಳೂರು ರಾಜಾಜಿನಗರ ಹಳಿ ತಪ್ಪಿದ ಮೆಟ್ರೋ ರೀ ರೈಲ್
ಬೆಂಗಳೂರು : ರಾಜಾಜಿನಗರ ಬಳಿ ನಮ್ಮ ಮೆಟ್ರೋ ರೀ ರೈಲು ಹಳಿ ತಪ್ಪಿದ್ದು, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ನಮ್ಮ ಮೆಟ್ರೋ ರೀ ರೈಲು ಹಳಿ ತಪ್ಪಿದ್ದು, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.ರಾಜಾಜಿನಗರ ಬಳಿ ಉಂಟಾದ ತಾಂತ್ರಿಕ ಸಮಸ್ಯೆ ಸರಿಪಡಿಸಲು ಮೆಟ್ರೋ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಮಧ್ಯಾಹ್ನದ ವೇಳೆಗೆ ಸಮಸ್ಯೆ ಸರಿಹೋಗುವ ಸಾಧ್ಯತೆ ಇದೆ. ಅಲ್ಲಿಯವರಿಗೆ ಈ ಮಾರ್ಗದಲ್ಲಿ ಸಂಚಾರ ಸ್ಥಗಿತವಾಗಿರಲಿದೆ. ಸದ್ಯ ರಾಜಾಜಿನಗರದಿಂದ ಮಂತ್ರಿ ಸ್ಕ್ವೇರ್ ಮತ್ತು ಯಶವಂತಪುರ ನಡುವಿನ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಪ್ರಯಾಣಿಕರು ಪರದಾಡಿದರು.