ಆಗಸ್ಟ್ 28-ಸೆ.1: ಎಂಜಿಎಂ ಕಾಲೇಜಿನಲ್ಲಿ ಛಾಯಚಿತ್ರ ಪ್ರದರ್ಶನ ಸ್ಪೆಕ್ಟ್ರಮ್
ಉಡುಪಿ: ಉಡುಪಿ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ಛಾಯಾಗ್ರಾಹಕ ಫೋಕಸ್ ರಾಘು ಅವರ ಛಾಯಾ ಚಿತ್ರ ಪ್ರದರ್ಶನ ‘ಸ್ಪೆಕ್ಟ್ರಮ್’ ಆಗಸ್ಟ್ 28ರಿಂದ ಸೆಪ್ಟೆಂಬರ್ 1ರ ವರೆಗೆ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಮಂಜುನಾಥ್ ಕಾಮತ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆ. 28ರಂದು ಬೆಳಿಗ್ಗೆ 10ಗಂಟೆಗೆ ಫೋಕಸ್ ರಾಘು ಅವರ ತಾಯಿ ರತ್ನಾವತಿ ಪ್ರದರ್ಶನಕ್ಕೆ ಚಾಲನೆ ನೀಡುವರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ. ವಿಜಯ […]