ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಅವಕಾಶ

ಉಡುಪಿ: ಜಿಲ್ಲೆಯ ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕುಗಳನ್ನು ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಆಧಿನಿಯಮದ ವಿಧಿ 3(4) ರಡಿ ನೀಡಿದ ಅಧಿಕಾರದನ್ವಯ 2022-2023 ರ ಮಾಸ್ಟರ್ ಸುತ್ತೋಲೆಯ ಅಧ್ಯಾಯ 4.2.3 ರ ಅನ್ವಯ ಬರಪೀಡಿತ ತಾಲೂಕುಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ಕುಟುಂಬಕ್ಕೆ ಹೆಚ್ಚುವರಿಯಾಗಿ 50 ದಿನಗಳ ಅಂದರೆ ಒಟ್ಟು 150 ದಿನಗಳ ಉದ್ಯೋಗ […]