ಹೊಸ ಭಯೋತ್ಪಾದಕ ಗುಂಪುಗಳು ರಚನೆಯಾಗದಂತಹ ಕಾರ್ಯವಿಧಾನ ಅನುಸರಿಸಿ: ಏಜೆನ್ಸಿಗಳಿಗೆ ಅಮಿತ್ ಶಾ ಕರೆ

ನವದೆಹಲಿ: ಹೊಸ ಭಯೋತ್ಪಾದಕ ಗುಂಪುಗಳು ರಚನೆಯಾಗದಂತೆ ಎಲ್ಲಾ ಭಯೋತ್ಪಾದನಾ ವಿರೋಧಿ ಏಜೆನ್ಸಿಗಳು ಕಠಿಣ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು. ಗುರುವಾರ ನವದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆಯೋಜಿಸಿದ್ದ ಎರಡು ದಿನಗಳ ಭಯೋತ್ಪಾದನಾ ವಿರೋಧಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಎಲ್ಲಾ ರೀತಿಯ ಭಯೋತ್ಪಾದನೆಯನ್ನು ದೃಢವಾಗಿ ನಿಗ್ರಹಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳು ಯಶಸ್ವಿಯಾಗಿದೆ. ಎನ್‌ಐಎ ವ್ಯಾಪ್ತಿಯಲ್ಲಿ ಮಾದರಿ ಭಯೋತ್ಪಾದನೆ ನಿಗ್ರಹ ರಚನೆಯನ್ನು […]

ಭಯೋತ್ಪಾದಕ ಕೃತ್ಯ ಪ್ರಚಾರಕ್ಕೆ ಬಳಕೆ ಹಿನ್ನೆಲೆ 14 ಮೊಬೈಲ್ ಸಂದೇಶ ಅಪ್ಲಿಕೇಶನ್‌ ಗಳನ್ನು ನಿಷೇಧಿಸಿದ ಕೇಂದ್ರ

ಹೊಸದಿಲ್ಲಿ: ಭಯೋತ್ಪಾದಕ ಚಟುವಟಿಕೆಗಳ ವಿರುದ್ಧದ ದೊಡ್ಡ ಶಿಸ್ತುಕ್ರಮದಲ್ಲಿ, ಭಯೋತ್ಪಾದಕ ಗುಂಪುಗಳು ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರ ಕೇಂದ್ರಿತವಾಗಿ ತಮ್ಮ ಬೆಂಬಲಿಗರು ಮತ್ತು ಕಾರ್ಮಿಕರೊಂದಿಗೆ ಸಂವಹನ ನಡೆಸಲು ಮತ್ತು ಪಾಕಿಸ್ತಾನದಿಂದ ಸೂಚನೆಗಳನ್ನು ಸ್ವೀಕರಿಸಲು ಬಳಸುತ್ತಿದ್ದ 14 ಮೊಬೈಲ್ ಸಂದೇಶ ಅಪ್ಲಿಕೇಶನ್‌ಗಳನ್ನು ಕೇಂದ್ರವು ನಿಷೇಧಿಸಿದೆ ಎಂದು ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ನಿಷೇಧಿತ ಅಪ್ಲಿಕೇಶನ್‌ಗಳಲ್ಲಿ ಕ್ರಿಪ್‌ವೈಸರ್, ಎನಿಗ್ಮಾ, ಸೇಫ್‌ಸ್ವಿಸ್, ವಿಕ್ರಮ್, ಮೀಡಿಯಾಫೈರ್, ಬ್ರಿಯಾರ್, ಬಿಚಾಟ್, ನಂಡ್‌ಬಾಕ್ಸ್, ಕೊನಿಯನ್, ಐಎಂಒ, ಎಲಿಮೆಂಟ್, ಸೆಕೆಂಡ್ ಲೈನ್, ಝಾಂಗಿ ಮತ್ತು ಥ್ರೀಮಾ ಸೇರಿವೆ. ಭದ್ರತಾ […]

ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ CAPF ಕಾನ್ಸ್‌ಟೇಬಲ್ ಪರೀಕ್ಷೆ ನಡೆಸಲು ಕೇಂದ್ರ ಗೃಹ ಸಚಿವಾಲಯ ನಿರ್ಧಾರ

ನವದೆಹಲಿ: 2024 ಜ.1ರ ಬಳಿಕ ಕೇಂದ್ರ ಅರೆಸೇನಾ ಪಡೆಗಳು ಅಥವಾ CAPF ಗಳಲ್ಲಿ ಕಾನ್ಸ್‌ಟೇಬಲ್‌ಗಳ (ಜನರಲ್ ಡ್ಯೂಟಿ) ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್‌ಗೆ ಹೆಚ್ಚುವರಿಯಾಗಿ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ನಿರ್ಧರಿಸಿದೆ. CAPF ಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಗೆ ಉತ್ತೇಜನ ನೀಡಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಕ್ರಮದಲ್ಲಿ ತೆಗೆದುಕೊಂಡ “ಹೆಗ್ಗುರುತಿನ” ನಿರ್ಧಾರ ಎಂದು ಸಚಿವಾಲಯ ಬಣ್ಣಿಸಿದೆ. ಪ್ರಶ್ನೆ ಪತ್ರಿಕೆಗಳನ್ನು […]

ಮಮತಾ ಬ್ಯಾನರ್ಜಿಗೆ ಸಂಕಷ್ಟ: ಪಶ್ಚಿಮ ಬಂಗಾಳದ ಮೊಮಿನ್‌ಪುರ ಹಿಂಸಾಚಾರದ ತನಿಖೆ ಎನ್‌ಐಎ ತೆಕ್ಕೆಗೆ

ಕೋಲ್ಕತ್ತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸಂಕಷ್ಟ ಎದುರಾಗಿದ್ದು, ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳದ ಮೊಮಿನ್‌ಪುರ ಮತ್ತು ಅಕ್ಕ ಪಕ್ಕದಲ್ಲಿ ಅಕ್ಟೋಬರ್ 9 ರಂದು ನಡೆದ ಹಿಂಸಾಚಾರದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿ ಆದೇಶಿಸಿದೆ. ರಾಜ್ಯ ಸರ್ಕಾರದಿಂದ ವರದಿ ಪಡೆದ ನಂತರ ಗೃಹ ಸಚಿವಾಲಯವು ಎನ್‌ಐಎ ತನಿಖೆಗೆ ಅನುಮೋದನೆ ನೀಡಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಈ ಹಿಂದೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದು ರಾಜ್ಯದ ಹಿಂಸಾಚಾರ ಪೀಡಿತ […]