ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
ಬೆಂಗಳೂರು: ರಾಜ್ಯದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಏಪ್ರಾನ್, ತಲೆಗವಸು, ಕೈಗವರು ಧರಿಸಲು ಸೂಚಿಸಿದೆ. ಅಲ್ಲದೇ ಅಡುಗೆ ಸಿಬ್ಬಂದಿಗಳು ಬಳೆ ತೊಡದಂತೆ ಸೂಚಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ, ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಿಸಿಯೂಟ ಸಿಬ್ಬಂದಿಯು ಪಾಲಿಸಬೇಕಾದ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಅಡುಗೆ ಸಿಬ್ಬಂದಿ ಏಪ್ರಾನ್, ತಲೆಗವಸು ಮತ್ತು ಕೈಗವಸುಗಳನ್ನು ಧರಿಸಬೇಕು. ಕೈಗಳಲ್ಲಿ […]
ಸರಕಾರ ಶಾಲಾ ಬಿಸಿಯೂಟಕ್ಕೆ ತೊಗರಿಬೇಳೆ ಪೂರೈಸಲೂ ಪರದಾಡುತ್ತಿರುವುದು ವಿಷಾದನೀಯ: ವೆರೋನಿಕಾ ಕರ್ನೆಲಿಯೋ
ಉಡುಪಿ: 40% ಕಮೀಷನ್ ಪಡೆಯುವ ಭರದಲ್ಲಿ ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟಕ್ಕೆ ತೊಗರಿ ಬೇಳೆ ಪೊರೈಸಲು ಮರೆತಿರುವ ರಾಜ್ಯ ಸರಕಾರದ ಧೋರಣೆ ನಿಜಕ್ಕೂ ದುರದೃಷ್ಠಕರವಾಗಿದೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್ ಗೂ ಮೊದಲು ಪ್ರತೀ ತಿಂಗಳು ರಾಜ್ಯ ಮಟ್ಟದಲ್ಲಿ ಟೆಂಡರ್ ಕರೆದು ತೊಗರಿ ಬೇಳೆ ಪೂರೈಸಲಾಗುತ್ತಿತ್ತು. ಕೋವಿಡ್ ಬಳಿಕ ಮೂರು ತಿಂಗಳಿಗೊಮ್ಮೆ ತೊಗರಿಬೇಳೆಯನ್ನು ಒಂದೇ ಬಾರಿಗೆ ಸರಬರಾಜು ಮಾಡಲಾಗುತ್ತಿತ್ತು. ಕಳೆದ ಸಪ್ಟೆಂಬರ್ ಮೊದಲ ವಾರದಲ್ಲಿ ಶಾಲೆಗಳಿಗೆ ತೊಗರಿಬೇಳೆ ಸರಬರಾಜು ಆಗಿತ್ತು. […]