ನಂದಿನಿ ಹಾಲು ಹಾಗೂ ಮೊಸರಿನ ದರದಲ್ಲಿ ನಾಳೆಯಿಂದ ಏರಿಕೆ

ಬೆಂಗಳೂರು:ನಾಳೆಯಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್​ ಪ್ರಕಟಣೆಯಲ್ಲಿ ತಿಳಿಸಿದೆ. ಕೆಎಂಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಭೀಮಾನಾಯ್ಕ ಕೆಎಂಎಫ್ ಹಾಲಿನ ದರವನ್ನು ಕನಿಷ್ಠ 5 ರೂ. ಏರಿಕೆ ಮಾಡುವುದಾಗಿ ಸುಳಿವು ನೀಡಿದ್ದರು. ಜುಲೈ 21ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿನ ದರವನ್ನು 3 ರೂಪಾಯಿಗೆ ಏರಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು. ನಂದಿನಿ ಹಾಲು ಪ್ರತಿ ಲೀಟರ್​ಗೆ ಹಾಗೂ ಮೊಸರಿನ ದರ ಪ್ರತಿ ಕೆಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ.ರಾಜ್ಯದಲ್ಲಿ […]