ವಿಧಾನಸೌಧದಲ್ಲಿ ಅದ್ದೂರಿ ಕಾರ್ಯಕ್ರಮ, ಪ್ರಶಸ್ತಿ ಪ್ರದಾನ ಸಮಾರಂಭ ; ನಾಳೆ ಶಿಕ್ಷಕರ ದಿನಾಚರಣೆ
ಬೆಂಗಳೂರು: ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ನಿಮಿತ್ತ ನಾಳೆ ವಿಧಾನಸೌಧದಲ್ಲಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ, ನ್ಯಾಕ್ ಪುರಸ್ಕೃತ ಕಾಲೇಜುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜನೆ ಮಾಡಲಾಗಿದೆ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಾಳೆ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೆ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ನಂತರ ಪ್ರಾಥಮಿಕ ಹಾಗೂ ಪ್ರೌಢ […]