ಕೊಲ್ಲೂರು ದೇಗುಲದಲ್ಲಿ ಕೋಟ್ಯಾಂತರ ರೂ.ಗಳ ಅವ್ಯವಹಾರ: ದೇವಸ್ಥಾನ-ಧಾರ್ಮಿಕ ಸಂಸ್ಥೆಗಳ ಮಹಾಸಂಘ ಆರೋಪ
ಕೊಲ್ಲೂರು: ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ನಡೆಯುತ್ತಿದ್ದು, ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸರಕಾರಿ ಅಧಿಕಾರಿ ಸೇರಿ ದೇವಳದ ಹಣ, ಸಂಪತ್ತನ್ನು ಲೂಟಿ ಹೊಡೆಯುತ್ತಿದ್ದಾರೆ ಎಂದು ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಗಂಭೀರ ಆರೋಪ ಮಾಡಿದೆ. ಮಂಗಳವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವಕ್ತಾರರಾದ ಗುರುಪ್ರಸಾದ್ ಗೌಡ ಮಾಹಿತಿ ನೀಡಿದ್ದು, ದೇವಸ್ಥಾನದಲ್ಲಿ ದೇಣಿಗೆ ರೂಪದಲ್ಲಿ ದೊರೆತ ಬಂಗಾರ […]