ರೈಲಿನಲ್ಲಿ ಉಡುಪಿಗೆ ಬರುತ್ತಿದ್ದ ವ್ಯಕ್ತಿಯ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಮಣಿಪಾಲ: ಮುಂಬೈನಿಂದ ಉಡುಪಿಗೆ ರೈಲಿನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರ ಬಳಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾಪು ತಾಲೂಕಿನ ಶಿರ್ವ ಗ್ರಾಮದ ಬಂಟಕಲ್ ನಿವಾಸಿ ತುಕಾರಾಂ ಭಟ್ ಅವರು ಪತ್ನಿ ಮತ್ತು ಮಗಳೊಂದಿಗೆ ಜುಲೈ 10 ರಂದು ರಾತ್ರಿ 10.45ರ ಸುಮಾರಿಗೆ ಮುಂಬೈನ ಥಾಣೆ ರೈಲ್ವೇ ಸ್ಟೇಷನ್ ನಿಂದ ಉಡುಪಿಗೆ ರೈಲಿನಲ್ಲಿ ಹೊರಟಿದ್ದರು. ತುಕಾರಾಂ ಅವರ ಪತ್ನಿ ಹಾಗೂ ಮಗಳು‌ ತಮ್ಮಲ್ಲಿದ್ದ ಚಿನ್ನಾಭರಣಗಳನ್ನು ಬ್ಯಾಗ್ ನಲ್ಲಿ ಹಾಕಿ ಬಟ್ಟೆಯ ಮಧ್ಯೆ ಇಟ್ಟಿದ್ದರು. […]