ಮಂಗಳೂರು: ಜಿ.ಪಂ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಸರಕಾರಿ ವೈದ್ಯರನ್ನು ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿ ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿದ್ದ ಕುಟುಂಬವನ್ನು ನೋಡಲು ತೆರಳಿದ್ದ ಅಧ್ಯಕ್ಷೆ ಸರಕಾರಿ ಆಸ್ಪತ್ರೆ ಯಲ್ಲಿ ವೈದ್ಯರನ್ನು ನಿಂದಿಸಿದ್ದು, ಆ ವೀಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ವೈದ್ಯೆ ಡಾ.ಅರ್ಚನಾ ಅವರು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.