ಗೋವಾದಲ್ಲಿ ತನ್ನ 4 ವರ್ಷದ ಮಗನನ್ನು ಹತ್ಯೆಗೈದು ಶವದ ಜೊತೆ ಕರ್ನಾಟಕಕ್ಕೆ ಪ್ರಯಾಣಿಸಿದ ಬೆಂಗಳೂರಿನ ಸ್ಟಾರ್ಟ್‌ಅಪ್ ಸಂಸ್ಥಾಪಕಿ: ಚಿತ್ರದುರ್ಗದಲ್ಲಿ ಬಂಧನ

ಪಣಜಿ: ಬೆಂಗಳೂರಿನಲ್ಲಿ ಸ್ಟಾರ್ಟ್‌ಅಪ್ ಸಂಸ್ಥಾಪಕಿಯಾಗಿರುವ 39 ವರ್ಷದ ಮಹಿಳೆಯೊಬ್ಬಳು ಗೋವಾದಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಹತ್ಯೆಗೈದಿದ್ದು ಮಗನ ಶವದೊಂದಿಗೆ ಕರ್ನಾಟಕಕ್ಕೆ ಪ್ರಯಾಣಿಸಿರುವ ಘಟನೆ ವರದಿಯಾಗಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್‌ಅಪ್ ಮೈಂಡ್‌ಫುಲ್ ಎಐ ಲ್ಯಾಬ್‌ನ ಸಹ ಸಂಸ್ಥಾಪಕಿ ಸುಚನಾ ಸೇಠ್ ಅವರನ್ನು ಸೋಮವಾರದಂದು ಕರ್ನಾಟಕದ ಚಿತ್ರದುರ್ಗದಲ್ಲಿ ಆಕೆಯ ಮಗನ ಶವದ ಚೀಲದ ಜೊತೆ ಬಂಧಿಸಲಾಗಿದೆ. ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಆಕೆ ತನ್ನ ಮಗನನ್ನು ಕೊಂದಿದ್ದಾಳೆ ಎಂದು ವರದಿ ಹೇಳಿದೆ. ಆದರೆ ಕೊಲೆಯ ಉದ್ದೇಶ ಇನ್ನೂ ತಿಳಿದಿಲ್ಲ. […]