ಕಂದಾಯ ಇಲಾಖೆಯಿಂದ “ಹಳ್ಳಿಗಳಿಗೆ ನಡೆಯಿರಿ ಅಧಿಕಾರಿಗಳೇ” ಕಾರ್ಯಕ್ರಮ – ಸಚಿವ ಅಶೋಕ್
ಉಡುಪಿ : ಕಂದಾಯ ಇಲಾಖೆ ವತಿಯಿಂದ, ಜನರ ಮನೆ ಬಾಗಿಲಿಗೇ ತೆರಳಿ ಸೌಲಭ್ಯ ವಿತರಿಸುವ “ಹಳ್ಳಿಗಳಿಗೆ ನಡೆಯಿರಿ ಅಧಿಕಾರಿಗಳೇ” ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಅವರು ಬುಧವಾರ ಉಡುಪಿಯಲ್ಲಿ, ನೂತನವಾಗಿ ನಿರ್ಮಾಣಗೊಂಡ 10 ಕೋಟಿ ವೆಚ್ಚದ ಮಿನಿ ವಿಧಾನಸೌಧ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರರು ಪ್ರತಿ ತಿಂಗಳಲ್ಲಿ ಒಂದು ದಿನ, ತಮ್ಮ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಬಾಕಿ […]