ಸಾಮಾಜಿಕ ಸ್ವಾಸ್ಥ್ಯ ಕದಡುವ ವಿಷಯಗಳ ನಿಯಂತ್ರಣಕ್ಕೆ ಶೀಘ್ರ ಜಾಲತಾಣಗಳ ಮುಖ್ಯಸ್ಥರ ಸಭೆ: ಗೃಹ ಸಚಿವ ಬೊಮ್ಮಾಯಿ
ಹಾವೇರಿ: ಕೋಮು ಸಾಮರಸ್ಯ ಸೇರಿದಂತೆ ಸಾಮಾಜಿಕ ಸ್ವಾಸ್ಥ್ಯ ಕದಡುವ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ವಿಷಯಗಳ ಪೂರ್ವ ಪರಿಶೀಲನೆ ಕುರಿತಂತೆ ಚರ್ಚಿಸಲು ಎಲ್ಲ ಜಾಲತಾಣಗಳ ಮುಖ್ಯಸ್ಥರನ್ನು ಕರೆದು ಚರ್ಚಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಇನ್ಸಟ್ರಾಗ್ರಾಂ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ವಿಷಯಗಳನ್ನು ಪೋಸ್ಟ್ ಮಾಡುವ ಮುನ್ನ ಆಯಾ ಕಂಪನಿಗಳು ಪರಿಶೀಲಿಸಿ ಈ […]