ಉಡುಪಿ ಜಿಲ್ಲೆಯ ಸಮಸ್ಯೆಗಳಿಗೆ ಸೂಕ್ತ ಪರಿಹಾರ: ಬಸವರಾಜ ಬೊಮ್ಮಾಯಿ

ಉಡುಪಿ: ಜಿಲ್ಲೆಯಲ್ಲಿರುವ ಮರಳು ಸಮಸ್ಯೆ, ಕ್ವಾರಿ ಸಮಸ್ಯೆ ಮತ್ತು ಡೀಮ್ಡ್ ಫಾರೆಸ್ಟ್ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆಯನ್ನು ನಡೆಸಿ ಸರಕಾರದ ವತಿಯಿಂದ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು. ಅಂಬೇಡ್ಕರ್ ನಿಗಮ, ವಾಲ್ಮೀಕಿ ನಿಗಮ ಮತ್ತು ದೇವರಾಜ್ ಅರಸು ನಿಗಮದ ವತಿಯಿಂದ ಅನುಮೋದನೆಯಾಗಿರುವ ಎಲ್ಲಾ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ […]