ಪ್ರಸ್ತುತ ಸಾಲಿನ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಅನುದಾನದ ಪರಿಣಾಮಕಾರಿ ಅನುಷ್ಠಾನಕ್ಕೆ ಉಸ್ತುವಾರಿ ಸಚಿವ ಅಂಗಾರ ಸೂಚನೆ
ಉಡುಪಿ: ಸರ್ಕಾರ ಪ್ರಸುತ್ತ ಸಾಲಿಗೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಯೋಜನೆಗಳಿಗೆ ಮಂಜೂರು ಮಾಡಿರುವ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರೊಂದಿಗೆ ಪ್ರತಿಶತ 100 ರಷ್ಟು ಪರಿಣಾಮಕಾರಿಯಾಗಿ ಮಾರ್ಚ್ ಅಂತ್ಯದೊಳಗೆ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ರೂಪಿಸಿ ಅದಕ್ಕನುಗುಣವಾಗಿ ಅನುದಾನವನ್ನೂ ಸಹ ನೀಡಿದೆ. ಇವುಗಳ […]