ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ. ರವಿ
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಸಿ.ಟಿ.ರವಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಎರಡು ಹುದ್ದೆಗಳಲ್ಲಿ ಮುಂದುವರೆಯಲು ಅವಕಾಶ ಇಲ್ಲದ ಕಾರಣದಿಂದ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶನಿವಾರ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಆದರೆ, ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಇದೇ 5ರಂದು ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆ […]