ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಸಚಿವ ಈಶ್ವರಪ್ಪ ದೂರು
ಬೆಂಗಳೂರು: ತಮ್ಮ ಇಲಾಖೆಗೆ ಸಂಬಂಧಿಸಿದ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಬುಧವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿರುವ ಈಶ್ವರಪ್ಪ ಅವರು ನಾಲ್ಕು ಪುಟಗಳ ದೂರು ಪತ್ರವನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ದೂರಿನ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕಳುಹಿಸಿಕೊಟ್ಟಿರುವುದಾಗಿ ಸಚಿವರು ಹೇಳಿದ್ದಾರೆ.