ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ಸಚಿವ ಈಶ್ವರಪ್ಪ ಭೇಟಿ‌

ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಶಾಸಕ ಅರವಿಂದ ಲಿಂಬಾವಳಿ ಮಂಗಳವಾರ ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ‌ನೀಡಿ ದೇವರ‌ ದರ್ಶನ‌ ಪಡೆದರು. ಶಾಸಕ‌ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿದರು. ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರವಿಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಗಿರಿಧರ ಆಚಾರ್ಯ, ಯಶ್ಪಾಲ್ ಸುವರ್ಣ ಪಾಡಿಗಾರು, ವಾಸುದೇವ ತಂತ್ರಿ, ಪಂಜ ಭಾಸ್ಕರ ಭಟ್, ದಿವಾಕರ ಐತಾಳ್ ರಮೇಶ ಬಾರಿತ್ತಾಯ, ಪೆರಂಪಳ್ಳಿ ವಾಸುದೇವ ಭಟ್ ಮೊದಲಾದವರು ಉಪಸ್ಥಿತರಿದ್ದರು.