ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಮೃತ್ತಿಕೆ ಸಂಗ್ರಹಿಸುವ ಅಭಿಯಾನಕ್ಕೆ ಸಚಿವ ಅಂಗಾರ ಚಾಲನೆ
ಉಡುಪಿ: ಶನಿವಾರದಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜಧಾನಿಯಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸುವ ಪೂರ್ವಭಾವಿಯಾಗಿ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹಿಸುವ ಅಭಿಯಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಚಾಲನೆ ನೀಡಿ, ಕೆಂಪೇಗೌಡರ ರಥಕ್ಕೆ ಆರತಿ ಬೆಳಗಿ, ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇತಿಹಾಸವನ್ನು ತಿಳಿದುಕೊಳ್ಳದೇ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ಇತಿಹಾಸದಲ್ಲಿ ಹಿರಿಯರ ತ್ಯಾಗ ಬಲಿದಾನದಿಂದ ಸಿಕ್ಕಿರುವ ಸ್ವಾತಂತ್ರ್ಯವನ್ನು ನಾವು ಸದುಪಯೋಗ ಪಡಿಸಿಕೊಳ್ಳಬೇಕು. ಬೆಂಗಳೂರಿನ ಸಮಗ್ರ ಬೆಳವಣಿಗೆಗೆ ಬಹಳ […]