ಶಾಸಕಿ ರೂಪಾಲಿ ನಾಯ್ಕ್ ರಿಂದ ಮೀನುಗಾರರ ಸಾಲಮನ್ನಾಕ್ಕೆ ಸಚಿವರಿಗೆ ಮನವಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮೀನುಗಾರು ಮೀನುಗಾರಿಕೆ ಉದ್ದೇಶಕ್ಕಾಗಿ ವಿವಿಧ ಸಹಕಾರಿ ಸಂಘ, ರಾಷ್ಟ್ರೀಕೃತ ಬ್ಯಾಂಕ್‌, ಸಹಕಾರಿ ಬ್ಯಾಂಕ್‌ ಹಾಗೂ ಕೆಡಿಸಿಸಿ ಬ್ಯಾಂಕ್‌ಗಳಿಂದ  ಪಡೆದಿದ್ದ ಸಾಲವನ್ನು ಮನ್ನಾ ಮಾಡುವಂತೆ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಕರಾವಳಿ ಭಾಗದಲ್ಲಿ ಕಡಲ ಮೀನುಗಾರಿಕೆ ಒಂದು ಉದ್ಯಮವಾಗಿದ್ದು, 2 ಲಕ್ಷಕ್ಕೂ ಅಧಿಕ ಜನರು ಜೀವನೋಪಾಯಕ್ಕಾಗಿ ಮೀನುಗಾರಿಕೆಯನ್ನು ಅವಲಂಬಿಸಿದ್ದಾರೆ. ಜಿಲ್ಲೆಯಲ್ಲಿ 8 ಪ್ರಮುಖ ಮೀನುಗಾರಿಕಾ ಬಂದರುಗಳಿವೆ. […]