ಮದ್ದಳೆ ವಾದಕ ಹಿರಿಯಡಕ ಗೋಪಾಲ್ ರಾವ್ ಅವರ ಅಂತಿಮ ದರ್ಶನ ಪಡೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಶನಿವಾರ ನಿಧನರಾದ ಮದ್ದಳೆ ಮಾಂತ್ರಿಕ ಶತಾಯುಷಿ ಹಿರಿಯಡಕ ಗೋಪಾಲ್ ರಾವ್ ಅವರ ನಿವಾಸಕ್ಕೆ ಭೇಟಿ ನೀಡಿದ ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗೋಪಾಲರಾವ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಯಕ್ಷಗಾನದ ಅತ್ಯಂತ ಹಿರಿಯ ಕಲಾವಿದ್ದರಾಗಿದ್ದ ಹಿರಿಯಡಕ ಗೋಪಾಲ್ ರಾವ್ ಅವರ ನಿಧನ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಠವಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಹೇಳಿದರು. […]