ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೊರೊನಾದಿಂದ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಅವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು, ಹೀಗಾಗಿ ನಗರದ ಆದರ್ಶ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಆದರ್ಶ ಆಸ್ಪತ್ರೆಯಲ್ಲಿ 14 ದಿನಗಳ ಕೋವಿಡ್ ಚಿಕಿತ್ಸೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದೇನೆ. ಕೋವಿಡ್ ವರದಿ ನೆಗೆಟಿವ್ ಬಂದಿದ್ದು, ನಿರಾಳವೆನಿಸಿದೆ. ನಾಳೆಯಿಂದ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನನಗೆ ಚಿಕಿತ್ಸೆ ನೀಡಿ ಬೇಗ ಗುಣಮುಖರಾಗುವಂತೆ ಮಾಡಿದ ಡಾ. ಚಂದ್ರಶೇಖರ್ ಮತ್ತು […]