ಆರೋಗ್ಯ ಸಚಿವ ಡಾ. ಸುಧಾಕರ್ ಕೂಡಲೇ ರಾಜೀನಾಮೆ ನೀಡಬೇಕು: ಬಿಜೆಪಿ ಶಾಸಕ ರೇಣುಕಾಚಾರ್ಯ ಆಗ್ರಹ
ಹೊನ್ನಾಳಿ: ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ನೈತಿಕ ಹೊಣೆ ಹೊತ್ತು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಚಾಮರಾಜನಗರ ಹಾಗೂ ಬೆಂಗಳೂರಿನಲ್ಲಿ ಆಮ್ಲಜನಕ ಸಿಗದೇ ಅನೇಕ ರೋಗಿಗಳು ಸಾವನ್ನಪ್ಪಿದ್ದಾರೆ. ಅವರ ಇಲಾಖೆಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡದೇ ಸುಧಾಕರ್ ಏನು ಮಾಡುತ್ತಿದ್ದಾರೆ ಎಂದು ಬುಧವಾರ ವಾಗ್ದಾಳಿ ನಡೆಸಿದರು. ಸುಧಾಕರ್ […]