ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ
ಶಿವಮೊಗ್ಗ: ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ವಿಪಕ್ಷಗಳ ಒತ್ತಡಕ್ಕೆ ಮಣಿದು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನ ಘೋಷಣೆ ಮಾಡಿದ್ದಾರೆ. ಇಂದು ಸಂಜೆ ದಿಢೀರ್ ತುರ್ತು ಸುದ್ದಿಗೋಷ್ಟಿ ನಡೆಸಿ, ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾಳೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಂಜೆ ವೇಳೆಗೆ ರಾಜೀನಾಮೆ ನೀಡೋದಾಗಿ ತಿಳಿಸಿದ್ದಾರೆ.