ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಹ ಪ್ರಭಾರಿಯಾಗಿ ಸಚಿವೆ ಶೋಭಾ ಕರಂದ್ಲಾಜೆ ನೇಮಕ

ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಸಹ ಪ್ರಭಾರಿಯನ್ನಾಗಿ ಬಿಜೆಪಿ ನಿಯುಕ್ತಿಗೊಳಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ದಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.