ವಿದ್ಯುತ್ ಬಿಲ್ ನಲ್ಲಿ ಅಕ್ರಮ: ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದ ಸಚಿವ ಸುನಿಲ್ ಕುಮಾರ್

ಬೆಂಗಳೂರು: ನಕಲಿ ವಿದ್ಯುತ್ ಬಿಲ್ ಸೃಷ್ಟಿಸಿ ಬೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟುಮಾಡಿದ ಆರೋಪದಡಿ ಮೂವರು ಸಿಬ್ಬಂದಿಯನ್ನು ಇಂಧನ ಸಚಿವ ಸುನಿಲ್ ಕುಮಾರ್ ಅವರು ಅಮಾನತುಗೊಳಿಸಿದ್ದಾರೆ. ಅಮಾನತುಗೊಂಡ ಸಿಬ್ಬಂದಿಯನ್ನು ಮುಳಬಾಗಿಲು ಉಪವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿ ಗಾಯತ್ರಮ್ಮ ಹಾಗೂ ಕಿರಿಯ ಸಹಾಯಕಿ ಸುಜಾತಮ್ಮ ಎಂದು ಗುರುತಿಸಲಾಗಿದೆ. ಇವರು ಗ್ರಾಹಕರಿಗೆ ವಿದ್ಯುತ್ ಬಿಲ್ ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ ಗಳನ್ನು ಮಾರ್ಪಾಟುಗೊಳಿಸಿ, ಅದರ ಮೊತ್ತವನ್ನು ಕಡಿಮೆಗೊಳಿಸುತ್ತಿದ್ದರು. ಆ ಮೂಲಕ ಬೆಸ್ಕಾಂಗೆ ಬರಬೇಕಿದ್ದ ಆದಾಯದಲ್ಲಿ ನಷ್ಟ […]