ಶೀಘ್ರದಲ್ಲೇ ಚಂದನ ವಾಹಿನಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸೇತುಬಂಧ’ ತರಗತಿಗಳ ಪ್ರಸಾರ: ಸಚಿವ ಸುರೇಶ್ ಕುಮಾರ್
ಬೆಂಗಳೂರು: ಕೊರೊನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲಾಗಳು ಆರಂಭಗೊಳ್ಳುವ ಸಾಧ್ಯತೆ ಕಡಿಮೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 8, 9 ಮತ್ತು 10ನೇ ತರಗತಿಗಳಿಗಾಗಿ ‘ಸೇತುಬಂಧ’ ಕಾರ್ಯಕ್ರಮಗಳ ವಿಡಿಯೊ ತರಗತಿಗಳನ್ನು ಸರ್ಕಾರ ಶೀಘ್ರದಲ್ಲಿಯೇ ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರ ಮಾಡಲಿದ್ದು, ಇದಕ್ಕೆ ಸಂಬಂಧಿಸಿದ ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಇಲಾಖೆಯ ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ-ಡಿಎಸ್ಇಆರ್ಟಿಯಲ್ಲಿ ಸೇತುಬಂಧ ಕಾರ್ಯಕ್ರಮದ […]